ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರು ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವುದನ್ನು ಆ ಆಳು ಕಂಡು ಅಮಾಸನ ಶವವನ್ನು ದಾರಿಯಿಂದ ಎಳೆದು, ಹೊಲದಲ್ಲಿ ಹಾಕಿ, ಅದನ್ನು ಬಟ್ಟೆಯಿಂದ ಮುಚ್ಚಿದನು.