ಪಾದಗಳಲ್ಲಿ ಹಾಗು ಪಾದಬೆರಳುಗಳಲ್ಲಿ ಒಂದು ಅಂಶ ಕಬ್ಬಿಣ ಮತ್ತೊಂದು ಅಂಶ ಮಣ್ಣು ಆಗಿದ್ದನ್ನು ನೀವು ನೋಡಿದಿರಿ. ಅಂತೆಯೇ ಆ ರಾಜ್ಯವು ಭಿನ್ನಭಿನ್ನವಾಗಿರುವುದು. ಜೇಡಿಮಣ್ಣಿನೊಂದಿಗೆ ಕಬ್ಬಿಣ ಮಿಶ್ರವಾಗಿದ್ದನ್ನು ನೀವು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲ ಸೇರಿರುವುದು.