ಅವರ ಗೋತ್ರಗಳ ಮೂಲಪುರುಷರು ಇವರು: ಇಸ್ರಯೇಲನ ಜ್ಯೇಷ್ಠ ಪುತ್ರನಾದ ರೂಬೇನನಿಗೆ ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ ಎಂಬವರು ಮಕ್ಕಳು. ಇವರೇ ರೂಬೇನನಿಂದ ಉಂಟಾದ ಗೋತ್ರಗಳಿಗೆ ಮೂಲ ಪುರುಷರು.