ಅಲ್ಲಿ ಧರ್ಮಶಾಸ್ತ್ರಿಗಳೂ ಪ್ರಮುಖರೂ ಸಭೆಸೇರಿದ್ದರು. ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು, ಹೊರಾಂಗಣವನ್ನು ಹೊಕ್ಕು ಪಹರೆಯವರ ಜೊತೆ ಕುಳಿತುಕೊಂಡನು. ಇದೆಲ್ಲ ಹೇಗೆ ಕೊನೆಗೊಳ್ಳುವುದೆಂದು ನೋಡಬೇಕೆಂಬ ಉದ್ದೇಶ ಅವನದಾಗಿತ್ತು.