ಚೊಕ್ಕಬಂಗಾರದ ದೀಪವೃಕ್ಷವನ್ನು ಮಾಡಿದನು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿದನು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಮೊಗ್ಗುಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿತ್ತು.