ಅದಕ್ಕೆ ಅವರು, “ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವುದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ,” ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗಿರಿಯಿಂದ ತಂದರು.