ಆಗ ಅರಸನು, “ಸೌಲನ ಕುಟುಂಬದವರಲ್ಲಿ ಯಾರಾದರೂ ಉಳಿದಿದ್ದರೆ ಹೇಳು; ನಾನು ದೇವರನ್ನು ನೆನಸಿ ಅವರಿಗೆ ದಯೆ ತೋರಿಸುತ್ತೇನೆ,” ಎಂದನು. ಆಗ ಚೀಬನು, “ಯೋನಾತಾನನಿಗೆ, ಎರಡು ಕಾಲೂ ಕುಂಟಾದ ಒಬ್ಬ ಮಗನಿರುತ್ತಾನೆ,” ಎಂದು ಹೇಳಿದನು.