ದಾರಿಯಲ್ಲಿ ಎಲೀಯನು ಎಲೀಷನಿಗೆ, “ದಯವಿಟ್ಟು ನೀನು ಇಲ್ಲೇ ಇರು; ಸರ್ವೇಶ್ವರ ನನಗೆ ಬೇತೇಲಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದನು. ಎಲೀಷನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾರೆ,” ಎಂದು ಉತ್ತರಕೊಟ್ಟನು. ಬಳಿಕ ಅವರಿಬ್ಬರೂ ಬೇತೇಲಿಗೆ ಹೋದರು.