ಆಗ ಆ ಸಹೋದರನು ಹೂಂಕರಿಸಿ, “ಈ ನಾಡಿಗೆ ವ್ರಣವೈದ್ಯನಾಗಿರಲು ನನಗಿಷ್ಟವಿಲ್ಲ. ಮನೆಯಲ್ಲಿ ತಿನ್ನಲು ಅನ್ನವಿಲ್ಲ, ಉಡಲು ಬಟ್ಟೆಯಿಲ್ಲ. ನನ್ನನ್ನು ಜನನಾಯಕನನ್ನಾಗಿ ಮಾಡುವುದು ಬೇಡ,” ಎಂದು ತಿರಸ್ಕಾರದಿಂದ ಉತ್ತರಿಸುವನು.