ಹನ್ನೆರಡುವರೆ ಕಿಲೋಮೀಟರ್ ಉದ್ದದ ಆ ಕ್ಷೇತ್ರದ ಪಕ್ಕದಲ್ಲಿ, (ಮೀಸಲುಪಾಲಿನ ಒಟ್ಟಳತೆಯಲ್ಲಿ), ಮಿಕ್ಕ ಎರಡುವರೆ ಕಿಲೋಮೀಟರ್ ಅಗಲದ ಭೂಮಿ ಮೀಸಲಿಲ್ಲವೆಂದೆಣಿಸಿ, ರಾಜಧಾನಿಗೆ ಅಂದರೆ, ಜನರ ನಿವಾಸಕ್ಕೂ ಸುತ್ತಣ ಪ್ರದೇಶಕ್ಕೂ ಪ್ರತ್ಯೇಕವಾಗಿರಲಿ. ರಾಜಧಾನಿ ಅದರ ಮಧ್ಯದಲ್ಲಿರಲಿ.