ಹದದೆಜೆರನಿಗೆ ದಾಸರಾಗಿದ್ದ ರಾಜರೆಲ್ಲರೂ ಇಸ್ರಯೇಲರ ಮುಂದೆ ತಮ್ಮ ಕೈಸಾಗದೆಂದು ತಿಳಿದು ಅವರೊಡನೆ ಸಂಧಾನ ಮಾಡಿಕೊಂಡು ಅವರ ಅಧೀನರಾದರು. ಅಂದಿನಿಂದ ಸಿರಿಯಾದವರು ಅಮ್ಮೋನಿಯರಿಗೆ ಸಹಾಯ ಮಾಡುವುದಕ್ಕೆ ಧೈರ್ಯಗೊಳ್ಳಲಿಲ್ಲ.