ಇವರಲ್ಲದೆ ದರ್ಶಿಯಾದ ಸಮುವೇಲನೂ ಕೀಷನ ಮಗ ಸೌಲನೂ ನೇರನ ಮಗ ಅಬ್ನೇರನೂ ಜೆರೂಯಳ ಮಗ ಯೋವಾಬನೂ ಹಾಗೆಯೇ ಮಾಡಿದ್ದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು.