ಇವರ ಕಾಲದಲ್ಲಿದ್ದವರು - ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು.ದೈವಪುರುಷ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.